ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ನೆರೆಯಿಂದ ಸಾವಿರಾರು ಮನೆಗಳಿಗೆ ಅಪಾರ ಹಾನಿ ಉಂಟಾದ ಹಿನ್ನಲೆ ಆಗಸ್ಟ್ ತಿಂಗಳಲ್ಲಿ ಹೊರಡಿಸಿದ್ದ ಆದೇಶವನ್ನು ಯಥಾವತ್ತಾಗಿ ಮುಂದುವರೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ರಾಜ್ಯ ಸರ್ಕಾರವು ಕೇಂದ್ರದ ಮಾರ್ಗಸೂಚಿಯಲ್ಲಿ ನಿರ್ಧರಿಸಿದ ದರಕ್ಕಿಂತ ಹೆಚ್ಚುವರಿಯಾಗಿ ಪರಿಹಾರ ಒದಗಿಸಲು ಮಂಜೂರಾತಿ ನೀಡಿ ಆದೇಶ ಹೊರಡಿಸಿದ್ದು ಶೇ.75ಕ್ಕಿಂತ ಹೆಚ್ಚು ಭಾಗ ಮನೆಗೆ ಹಾನಿಯಾಗಿದ್ದರೆ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.
ಶೇ. 25 ರಿಂದ75 ರಷ್ಟು ಮನೆ ಹಾನಿಯಾಗಿದ್ದರೆ ಮನೆ ಕೆಡವಿ ಹೊಸದಾಗಿ ನಿರ್ಮಿಸಲುರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ ಶೇ. 25 ರಿಂದ 75 ರಷ್ಟು ದುರಸ್ತಿಗೆ 3 ಲಕ್ಷ ಪರಿಹಾರ ಘೋಷಣೆ ಮಾಡಿದ್ದೂ, ಶೇ. 15 ರಿಂದ 25 ರಷ್ಟು ಮನೆ ಹಾನಿಗೆ 50 ಸಾವಿರ ಪರಿಹಾರ ಘೋಷಣೆ ಮಾಡಿ ರಾಜ್ಯ ಆದೇಶ ಹೊರಡಿಸಿದೆ.
ಇದನ್ನು ಓದಿ: ಎಚ್ಚರಿಕೆ: ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನು 3 ದಿನ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ!