Tourists Alert: 3 ತಿಂಗಳು ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ!

ಶಿವಮೊಗ್ಗ: ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇಲ್ಲೊಂದು ಮಹತ್ವದ ಸುದ್ದಿಯಿದೆ. ಜೋಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಮೂರು ತಿಂಗಳು ಕಾಲ ಜೋಗ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ…

ಶಿವಮೊಗ್ಗ: ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇಲ್ಲೊಂದು ಮಹತ್ವದ ಸುದ್ದಿಯಿದೆ. ಜೋಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಮೂರು ತಿಂಗಳು ಕಾಲ ಜೋಗ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು  ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸಬಹುದಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply