ಡಾಲರ್ ಎದುರು ರೂಪಾಯಿ ಮೌಲ್ಯ ಭಾರೀ ಕುಸಿತ ಕಂಡಿದ್ದು, ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಪ್ರತಿ ಡಾಲರ್ ಬೆಲೆ ರೂ 80ಕ್ಕೆ ಕುಸಿದಿದ್ದು, ಫಾರೆಕ್ಸ್ ಮಾರುಕಟ್ಟೆಯಲ್ಲಿ ರೂಪಾಯಿ ವಿನಿಮಯ ದರ ರೂ80.04 ತಲುಪಿದೆ.
ತೈಲ ದರ ಏರಿಕೆ ಮತ್ತು ನಿರಂತರ ಹಣದುಬ್ಬರ ಪರಿಣಾಮ ಭಾರತೀಯ ಷೇರುಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ರೂಪಾಯಿ ಮೌಲ್ಯ ಕುಸಿದರೆ ಆಗುವ ನಷ್ಟವೇನು?
➤ ವಿದೇಶಿ ವಿನಿಮಯ ಕಡಿಮೆಯಾಗುತ್ತದೆ.
➤ ಬಡ್ಡಿದರಗಳು ಮತ್ತಷ್ಟು ಹೆಚ್ಚಾಗುತ್ತವೆ.
➤ ನಾವು ಹೆಚ್ಚು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದರಿಂದ, ಹೆಚ್ಚು ಡಾಲರ್‌ಗಳನ್ನು ಪಾವತಿಸಬೇಕಾಗುತ್ತದೆ.
➤ ಹಣದುಬ್ಬರ ಹೆಚ್ಚಳವು ತರಕಾರಿಗಳು ಮತ್ತು ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸುತ್ತದೆ.
➤ ರೂಪಾಯಿ ಮೌಲ್ಯ ಕುಸಿತವು ರಫ್ತಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.