BREAKING: ಮಾಜಿ ಮುಖ್ಯಮಂತ್ರಿ ಮಾಧವ್ ಸಿಂಗ್ ಸೋಲಂಕಿ ವಿಧಿವಶ; ಪ್ರಧಾನಿ ಮೋದಿ ಸಂತಾಪ 

ಗಾಂಧಿನಗರ : ಗುಜರಾತ್ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಮಾಧವ್ ಸಿಂಗ್ ಸೋಲಂಕಿ (94) ಅವರು ತಮ್ಮ ಗಾಂಧಿನಗರದ ನಿವಾಸದಲ್ಲಿ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಮಾಧವ್ ಸಿಂಗ್ ಸೋಲಂಕಿ ಅವರು 1981ರಲ್ಲಿ KHAM…

ಗಾಂಧಿನಗರ : ಗುಜರಾತ್ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಮಾಧವ್ ಸಿಂಗ್ ಸೋಲಂಕಿ (94) ಅವರು ತಮ್ಮ ಗಾಂಧಿನಗರದ ನಿವಾಸದಲ್ಲಿ ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

ಮಾಧವ್ ಸಿಂಗ್ ಸೋಲಂಕಿ ಅವರು 1981ರಲ್ಲಿ KHAM (ಕ್ಷತ್ರಿಯ, ಹರಿಜನ, ಆದಿವಾಸಿ, ಮುಸ್ಲಿಂ) ಸೂತ್ರದ ಆಧಾರದ ಮೇಲೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಸಿಎಂ ಹುದ್ದೆಗೇರಿದ್ದರು. ಗುಜರಾತ್ ರಾಜ್ಯದಲ್ಲಿ ಮೊದಲ ಬಾರಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಪರಿಚಯಿಸಿದ್ದ ಮಾಧವ್ ಸಿಂಗ್ ಸೋಲಂಕಿ ಅವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

ಮಾಧವ್ ಸಿಂಗ್ ಸೋಲಂಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Vijayaprabha Mobile App free

ಮಾಜಿ ಮುಖ್ಯಮಂತ್ರಿ ಮಾಧವ್ ಸಿಂಗ್ ಅವರ ನಿಧನಕ್ಕೆ ಮೋದಿ ಸಂತಾಪ:

ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ, ಶ್ರೀ ಮಾಧವ್ ಸಿಂಗ್ ಸೋಲಂಕಿ ಅವರು ಅಸಾಧಾರಣ ನಾಯಕರಾಗಿದ್ದರು, ಗುಜರಾತ್ ರಾಜಕೀಯದಲ್ಲಿ ದಶಕಗಳಿಂದ ಪ್ರಮುಖ ಪಾತ್ರ ವಹಿಸಿದ್ದರು. ಅವರು ಸಮಾಜಕ್ಕೆ ಮಾಡಿದ ಸಮೃದ್ಧ ಸೇವೆಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ನಿಧನದಿಂದ ಬೇಸರವಾಯಿತು ಎಂದು ಟ್ವೀಟ್ ಮಾಡಿದ್ದೂ ಅವರ ಮಗ ಭಾರತ್ ಸೋಲಂಕಿ ಅವರೊಂದಿಗೆ ಮಾತನಾಡುತ್ತಾ ಸಂತಾಪ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.