ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ : ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು :ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು,…

siddaramaiah vijayaprabha

ಬೆಂಗಳೂರು :ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ?

ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳ ಇಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ?

Vijayaprabha Mobile App free

ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ ,ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ?

ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು.

ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಕೈಯಲ್ಲಿದೆ.

ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.