Former Chief Minister SM Krishna : ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ (SM Krishna) ಮಂಗಳವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಎಸ್ಎಂ ಕೃಷ್ಣ ಅವರನ್ನು ಅಕ್ಟೋಬರ್ 19ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಇಂದು ನಸುಕಿನ ಜಾವ 2:30ರ ಸುಮಾರಿಗೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.