BIG BREAKING: ಮಾಜಿ ಸಿಎಂ ನಿಧನ; ಕಂಬನಿ ಮಿಡಿದ ಪ್ರಧಾನಿ ಮೋದಿ!

ಅಹಮದಾಬಾದ್: ಅನಾರೋಗ್ಯದಿಂದ ಬಳಲುತ್ತಿದ್ದ ಗುಜರಾತ್​ನ ಮಾಜಿ ಸಿಎಂ ಕೇಶುಭಾಯ್ ಪಟೇಲ್ (92) ಅವರು ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಅಹಮದಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು…

keshubhai patel vijayaprabha news

ಅಹಮದಾಬಾದ್: ಅನಾರೋಗ್ಯದಿಂದ ಬಳಲುತ್ತಿದ್ದ ಗುಜರಾತ್​ನ ಮಾಜಿ ಸಿಎಂ ಕೇಶುಭಾಯ್ ಪಟೇಲ್ (92) ಅವರು ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಅಹಮದಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾದ ಕೇಶುಭಾಯ್ ಪಟೇಲ್ ಎರಡು ಅವಧಿಗೆ ಗುಜರಾತ್ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು.

ಗುಜರಾತ್​ನ ಮಾಜಿ ಸಿಎಂ ಕೇಶುಭಾಯ್ ಪಟೇಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿ. ಎಸ್ ಯಡಿಯೂರಪ್ಪ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಮಾಜಿ ಸಿಎಂ ಕೇಶುಭಾಯ್ ಪಟೇಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ:

Vijayaprabha Mobile App free

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ನಮ್ಮ ಪ್ರೀತಿಯ ಮತ್ತು ಗೌರವಾನ್ವಿತ ಕೇಶುಭಾಯ್ ನಿಧನರಾದರು… ನನಗೆ ತುಂಬಾ ನೋವು ಮತ್ತು ದುಃಖವಾಗಿದೆ. ಅವರು ಸಮಾಜದ ಪ್ರತಿಯೊಂದು ವರ್ಗವನ್ನು ನೋಡಿಕೊಳ್ಳುವ ಮಹೋನ್ನತ ನಾಯಕರಾಗಿದ್ದರು. ಅವರ ಜೀವನವು ಗುಜರಾತ್‌ನ ಪ್ರಗತಿ ಮತ್ತು ಪ್ರತಿ ಗುಜರಾತಿಯ ಸಬಲೀಕರಣದ ಕಡೆಗೆ ಮೀಸಲಾಗಿತ್ತು.

ಕೇಶುಭಾಯ್ ಅವರು ನನಗು ಸೇರಿದಂತೆ ಅನೇಕ ಕಿರಿಯ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದ್ದರು. ಪ್ರತಿಯೊಬ್ಬರೂ ಅವನ ಸ್ನೇಹಪರ ಸ್ವಭಾವವನ್ನು ಇಷ್ಟಪಟ್ಟಿದ್ದರು. ಅವರ ನಿಧನವು ಸರಿಪಡಿಸಲಾಗದ ನಷ್ಟವಾಗಿದೆ ಎಂದು ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.