ಬೆಂಗಳೂರು: ದೇಶದಲ್ಲಿ ಇಲ್ಲಿನ ವರೆಗೆ ಶೇಕಡ 0.5 ರಷ್ಟು ಜನಸಂಖ್ಯೆಗಷ್ಟೆ ಲಸಿಕೆ ನೀಡಿರುವುದು ವಿಷಾದನೀಯ ಬೆಳವಣಿಗೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೆರಡರಲ್ಲಿಯೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ವ್ಯವಸ್ಥೆ ಕಲ್ಪಿಸಬೇಕು.ಕೋವಿಡ್ ಚಿಕಿತ್ಸೆ ಮತ್ತು ಲಸಿಕೆ ನಿಯಂತ್ರಣಕ್ಕಾಗಿಯೇ ಪಿ.ಎಂ ಕೇರ್ಸ್ ನಿಧಿಗೆ ಕೇಂದ್ರ ಸರ್ಕಾರ ಹಣ ಸಂಗ್ರಹಿಸಿದೆ. ಆ ನಿಧಿಯನ್ನು ಕೋವಿಡ್ ಲಸಿಕೆಯ ಉಚಿತ ವಿತರಣೆಗೆ ಬಳಸಬೇಕು.
ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಕೋವಿಡ್ ಲಸಿಕೆಗೆ ರೂ.250 ಶುಲ್ಕ ನಿಗದಿಪಡಿಸಿರುವುದರಿಂದಾಗಿ ಶೇಕಡಾ 70 ರಷ್ಟಿರುವ ಬಡಜನತೆ ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ. ಇದರಿಂದಾಗಿ ಕೋವಿಡ್ ವಿರುದ್ಧದ ಸಮರಕ್ಕೆ ಹಿನ್ನಡೆಯಾಗಿದೆ.
ಈಗಾಗಲೇ ಭಾರತ ಎರಡು ಬಗೆಯ ಕೋವಿಡ್ ಲಸಿಕೆಗಳನ್ನು ಕಂಡು ಹಿಡಿದಿದ್ದರೂ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ದೇಶದಲ್ಲಿ ಇಲ್ಲಿನ ವರೆಗೆ ಶೇಕಡ 0.5 ರಷ್ಟು ಜನಸಂಖ್ಯೆಗಷ್ಟೆ ಲಸಿಕೆ ನೀಡಿರುವುದು ವಿಷಾದನೀಯ ಬೆಳವಣಿಗೆ.
ಇತ್ತೀಚೆಗೆ ಕೊರೊನಾ ಸೋಂಕು ಉಲ್ಭಣಗೊಳ್ಳುತ್ತಿರುವುದು ಕಳವಳಕಾರಿ ಬೆಳವಣಿಗೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿದರೆ ಅನಾಹುತವಾದೀತು, ಎಚ್ಚರ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೆರಡರಲ್ಲಿಯೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲು ಪ್ರಧಾನಿ @narendramodi ಅವರು ವ್ಯವಸ್ಥೆ ಕಲ್ಪಿಸಬೇಕು.
ಕೋವಿಡ್ ಚಿಕಿತ್ಸೆ ಮತ್ತು ಲಸಿಕೆ ನಿಯಂತ್ರಣಕ್ಕಾಗಿಯೇ ಪಿ.ಎಂ ಕೇರ್ಸ್ ನಿಧಿಗೆ ಕೇಂದ್ರ ಸರ್ಕಾರ ಹಣ ಸಂಗ್ರಹಿಸಿದೆ. ಆ ನಿಧಿಯನ್ನು ಕೋವಿಡ್ ಲಸಿಕೆಯ ಉಚಿತ ವಿತರಣೆಗೆ ಬಳಸಬೇಕು. 1/4 pic.twitter.com/V2h33bJVAS— Siddaramaiah (@siddaramaiah) March 5, 2021