ಬೆಂಗಳೂರು: ಮಾಜಿ ಸಿಎಂ ದಿ. ಗುಂಡೂರಾವ್ ಪತ್ನಿ ಹಾಗು ಕೆಪಿಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ (72) ಅವರು ವಿಧಿವಶರಾಗಿದ್ದಾರೆ. ವರಲಕ್ಷ್ಮಿ ಗುಂಡೂರಾವ್ ಅವರು ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ಮಂಗಳವಾರ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.
ವರಲಕ್ಷ್ಮಿ ಗುಂಡೂರಾವ್ ಅವರು, ಮಾಜಿ ಮುಖ್ಯಮಂತ್ರಿ ದಿ.ಗುಂಡೂರಾವ್ ಅವರ ನಿಧನದ ಬಳಿಕ 1996 ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ, ಸೋಲನ್ನು ಅನುಭವಿಸಿದ್ದರು.
ಮೃತ ವರಲಕ್ಷ್ಮಿ ಗುಂಡೂರಾವ್ ಅವರು, ಪುತ್ರರಾದ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್, ಮಹೇಶ್ ಗುಂಡೂರಾವ್ & ರಾಜೇಶ್ ಅವರನ್ನು ಅಗಲಿದ್ದಾರೆ. ವರಲಕ್ಷ್ಮಿ ಗುಂಡೂರಾವ್ ಅವರ ನಿಧನಕ್ಕೆ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.