ನವದೆಹಲಿ: ದೇಶದಲ್ಲಿ ಕರೋನ ಎರಡನೇ ಅಲೆ ಶುರುವಾಗಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೂಡ ಕೊರೋನಾ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ರಾಹುಲ್ ಗಾಂಧಿ ಮಾಹಿತಿ ನೀಡಿದ್ದು, ಸೌಮ್ಯ ರೋಗಲಕ್ಷಣಗಳು ಕಂಡುಬಂದ ನಂತರ ಕೋವಿಡ್ ಪರೀಕ್ಷೆಯಲ್ಲಿ ನನ್ನ ವರದಿ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ ಹಾಗೂ ಸುರಕ್ಷಿತವಾಗಿರಿ ಎಂದು ರಾಹುಲ್ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗೆ ತಮ್ಮ ಪಶ್ಸಿಮಾ ಬಂಗಾಳದ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಿದ್ದರು.
After experiencing mild symptoms, I’ve just tested positive for COVID.
All those who’ve been in contact with me recently, please follow all safety protocols and stay safe.
— Rahul Gandhi (@RahulGandhi) April 20, 2021