ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ ಎಂ.ರಾಮ ಜೋಯಿಸ್ (90) ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಎಂ.ರಾಮ ಜೋಯಿಸ್ ಶಿವಮೊಗ್ಗ ಮೂಲದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ, ಪಂಜಾಬ್ & ಹರ್ಯಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.
ಅಷ್ಟೇ ಅಲ್ಲದೆ ಭಾರತೀಯ ಜನತಾ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಬಿಹಾರ, ಜಾರ್ಖಂಡ್ ರಾಜ್ಯಪಾಲರಾಗಿ ಕೆಲಸ ಮಾಡಿದ್ದರು. ಎಂ.ರಾಮ ಜೋಯಿಸ್ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.