ದಾವಣಗೆರೆ: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಮತ್ತು ಕುರುಬ ಸಮುದಾಯದ ಹಿರಿಯ ಮುಖಂಡ, ಮಾಜಿ ಸಚಿವ ಡಾ.ವೈ.ನಾಗಪ್ಪ (75) ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಮಾಜಿ ಸಚಿವ ಡಾ.ವೈ.ನಾಗಪ್ಪ ಅವರು ನಿಧನರಾಗಿದ್ದು, ಒಬ್ಬ ಪುತ್ರ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿರುವ ಮೃತರ ಅಂತ್ಯಕ್ರಿಯೆ ಇಂದು ಹರಿಹರದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 1989, 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ಅವರು, 2004 ರಲ್ಲಿ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಡಾ.ವೈ.ನಾಗಪ್ಪ ಅವರು 2008 ರಲ್ಲಿ ನಡೆದ ಹರಿಹರದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ದಿಸಿ ಸೋಲನುಭವಿಸಿದ್ದರು. ಆ ನಂತರ ಅವರು ರಾಜಕೀಯದಿಂದ ದೂರ ಉಳಿದಿದ್ದರು.
ಇನ್ನು ಅನಾರೋಗ್ಯದ ಹಿನ್ನಲೆ ಇಂದು ಮಾಜಿ ಸಚಿವ ಡಾ.ವೈ.ನಾಗಪ್ಪ ಅವರು ನಿಧನರಾಗಿದ್ದು ರಾಜಕೀಯ ಗಣ್ಯರು ಸೇರಿದಂತೆ ಅಪಾರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಇದನ್ನು ಓದಿ: ಮಾಜಿ ಶಾಸಕ ಕೆ.ಮಲ್ಲಪ್ಪ ನಿಧನಕ್ಕೆ ಕುರುಬ ಸಮಾಜ ತೀವ್ರ ಸಂತಾಪ