ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಿಂದ ಮುಕ್ತನಾಗಿರುವ ನನಗೆ ಮತ್ತೆ ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಹೌದು, ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಿಂದ ಮುಕ್ತನಾಗಿರುವ ನನಗೆ ಮತ್ತೆ ಸಚಿವ ಸ್ಥಾನ ನೀಡುವುದು, ಬಿಡುವುದು ಸಿಎಂ ಬಸವರಾಜ್ ಬೊಮ್ಮಾಯಿಗೆ ಬಿಟ್ಟ ವಿಚಾರ. ನನಗೆ ಮುಂದಿನ ವಿಧಾನಸಭೆಗೆ ಟಿಕೆಟ್ ನೀಡುವುದು ಕೂಡ ಬಿಜೆಪಿ ವರಿಷ್ಠರಿಗೆ ಸೇರಿದ್ದು. ನಾನು ಮೊದಲ ಬಾರಿ ಶಾಸಕನಾದಾಗಲೂ ಟಿಕೆಟ್ ನೀಡುವಂತೆ ಹಠ ಹಿಡಿದಿರಲಿಲ್ಲ. ವರಿಷ್ಠರೇ ಗುರುತಿಸಿ ಕೊಟ್ಟಿದ್ದರು. ಈಗಲೂ ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದು ಈಶ್ವರಪ್ಪ ಹೇಳಿದ್ದಾರೆ