ಕೋಲ್ಕತ್ತಾ: ಶಾಲಾ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಟಿಎಂಸಿಯ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತ ಗೆಳತಿ ಅರ್ಪಿತಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹೌದು, ಜುಲೈ 23 ರಂದು ಬಂಧಿತ ಟಿಎಂಸಿಯ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತ ಗೆಳತಿ ಅರ್ಪಿತಾ ಇಬ್ಬರನ್ನು ಇಡಿ ವಿಚಾರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇನ್ನಷ್ಟು ಆಳವಾಗಿ ವಿಚಾರಣೆಗೊಳಪಡಿಸಬೇಕು ಎಂದು ಸರ್ಕಾರಿ ವಕೀಲರು ಮನವಿ ಮಾಡಿದರು.
ಈ ಹಿನ್ನಲೆಯಲ್ಲಿ, ಕೋಲ್ಕತ್ತಾದ ವಿಶೇಷ ನ್ಯಾಯಾಲಯ 1ಟಿಎಂಸಿಯ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತ ಗೆಳತಿ ಅರ್ಪಿತಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.