ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕಾರಿನಲ್ಲಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರು ಸಂಚರಿಸುವಾಗ ಕಾರು ಅಪಘಾತಕ್ಕೆ ಈಡಾಗಿದೆ.
ಈ ಘಟನೆಯು ಧಾರವಾಡ ನಗರದ ಕೆವಿಜಿ ಬ್ಯಾಂಕ್ ಎದುರು ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ.
ಈ ಅಪಘಾತದಲ್ಲಿ ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದಿದ್ದು, ಈ ಸಂಬಂಧ ಧಾರವಾಡ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.