ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ
ಹೌದು, ಬಸವಕಲ್ಯಾಣ ವಿಧಾನಸಭಾಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಇಂದು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ವಸತಿ ಸಚಿವ ವಿ. ಸೋಮಣ್ಣ ಅವರ ಮನವೊಲಿಕೆ ಯತ್ನ ವಿಫಲವಾಗಿದೆ.
ಇನ್ನು ಕಳೆದೆರಡು ದಿನಗಳ ಹಿಂದೆ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶರಣು ಸಲಗಾರ್ ಗೆ ಟಿಕೆಟ್ ನೀಡಿದೆ.