ಕಲಬುರಗಿ: ಚಿತ್ತಾಪುರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವಾಲ್ಮೀಕಿ ನಾಯಕ್ (75) ಅವರು ತೀವ್ರ ಹೃದಯಾಘಾತದಿಂದಾಗಿ ಇಂದು ನಿಧನರಾಗಿದ್ದಾರೆ.
ಮಾಜಿ ಶಾಸಕ ವಾಲ್ಮೀಕಿ ನಾಯಕ್ ಬೆಂಗಳೂರಿನಿಂದ ರೈಲಿನಲ್ಲಿ ವಾಪಸ್ಸಾಗುತ್ತಿದ್ದಾಗ ಹೃದಯಾಘಾತ ಸಂಭವಿಸದ್ದು, ಕೂಡಲೇ ಅವರನ್ನು ಕಲಬುರಗಿ ಜೆಮ್ಸ್ ಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಾಲ್ಮೀಕಿ ನಾಯಕ್ ಅವರು 2009ರಲ್ಲಿ ಚಿತ್ತಾಪುರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜಯಗಳಿಸಿದ್ದರು. ಬಿಜೆಪಿಯಲ್ಲಿ ನಿಷ್ಠರಿಗೆ ಬೆಲೆ ಇಲ್ಲ, ತಮಗೆ ಸೂಕ್ತ ಸ್ಥಾನಮಾನ ನೀಡುತ್ತಿಲ್ಲ ಎಂದು ಇತ್ತೀಚಿಗೆ ಅಲವತ್ತುಕೊಂಡಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




