Manmohan Singh passed away: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ.
ಹೌದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರಾಗಿದ್ದು, ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ “ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ದುಃಖವಾಗಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.