ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರ-ಜೊಯಿಡಾ ಭಾಗದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ವಿದ್ಯಾ ದಾನ ಮಾಡಿದ್ದ ರಾಜ್ಯದ ಮಾಜಿ ಶಿಕ್ಷಣ ಸಚಿವ ಪ್ರಭಾಕರ್ ರಾಣೆ ಅವರು ಶಿಕ್ಷಕರ ದಿನದಂದೇ ವಿಧಿವಶರಾಗಿದ್ದಾರೆ.
ಹೌದು, ತಿಂಗಳ ಹಿಂದೆ ಮಾಜಿ ಶಿಕ್ಷಣ ಸಚಿವ ಪ್ರಭಾಕರ್ ರಾಣೆ ಅವರು ಜ್ವರದಿಂದ ಬಳಲಿದ್ದು ಕಾರವಾರದ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕತ್ಸೆ ಪಡೆದಿದ್ದರು. ಬಳಿಕ ಕೊಂಚ ಚೇತರಿಸಿಕೊಂಡು ಮನೆಯಲ್ಲಿ ಹಾಸಿಗೆಯಲ್ಲೇ ಇದ್ದರು. ಆದರೆ ಅವರು ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಉತ್ತರ ಕನ್ನಡದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಮಾಜಿ ಶಿಕ್ಷಣ ಸಚಿವ ಪ್ರಭಾಕರ್ ರಾಣೆ ಅವರು, ಅದೇ ಸಂಸ್ಥೆಯ ಅಧ್ಯಕ್ಷರೂ ಆದರು. ಬಾಪೂಜಿ ಗ್ರಾಮೀಣ ವಿಕಾಸ ಸಂಸ್ಥೆ ಅಡಿ ಕಾರವಾರ, ಜೋಯಿಡಾ ಭಾಗದಲ್ಲಿ ಪ್ರಾಥಮಿಕ, ಪ್ರೌಢ & ಪಿಯು ಕಾಲೇಜುಗಳನ್ನು ಆರಂಭಿಸಿದರು. ನಂತರ ಕಾರವಾರ-ಜೋಯಿಡಾ ಕ್ಷೇತ್ರದಿಂದ 3 ಬಾರಿ ಶಿಕ್ಷಕರಾಗಿ ಆಯ್ಕೆಯಾಗಿ ಗ್ರಂಥಾಲಯ & ವಯಸ್ಕರ ಶಿಕ್ಷಣ ಸಚಿವರಾಗಿದ್ದರು.