ಟೀಮ್ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತ!

ನವದೆಹಲಿ : ಟೀಮ್ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆಗೆ ದೆಹಲಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, 61 ವರ್ಷದ ಅವರು ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರ ಅರೋಗ್ಯ…

ನವದೆಹಲಿ : ಟೀಮ್ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆಗೆ ದೆಹಲಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, 61 ವರ್ಷದ ಅವರು ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರ ಅರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

ಕಪಿಲ್ ದೇವ್ ಅವರು 1983 ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಏಕದಿನ ಟೂರ್ನಿಯಲ್ಲಿ ಭಾರತಕ್ಕೆ ಮೊದಲ ವಿಶ್ವಕಪ್ ತಂದುಕೊಟ್ಟಿದ್ದರು. ಕಪಿಲ್ ದೇವ್ ಅವರು ತಮ್ಮ16 ವರ್ಷದ ಕ್ರಿಕೆಟ್ ವೃತ್ತಿ ಜೀವನದಲ್ಲಿ 131 ಟೆಸ್ಟ್ ಪಂದ್ಯಗಳನ್ನು ಆಡಿದ್ದು 5248 ರನ್ ಗಳಿಸಿದ್ದು, 8 ಶತಕ ಹಾಗು 27 ಅರ್ಧ ಶಾಟಗಳನ್ನು ಗಳಿಸಿದ್ದಾರೆ. ಇನ್ನು ಬೌಲಿಂಗ್ ನಲ್ಲಿ 131 ಟೆಸ್ಟ್ ಪಂದ್ಯಗಳಿಂದ 434 ಕೆಟ್ ಕಬಳಿಸಿದ್ದಾರೆ.

ಇನ್ನು 225 ಏಕದಿನ ಪಂದ್ಯಗಳನ್ನಾಡಿದ್ದು, 3783 ರನ್ ಗಳಿಸಿದ್ದು, 1ಶತಕ ಸೇರಿದಂತೆ 14 ಅರ್ಧ ಶತಕಗಳನ್ನು ಬಾರಿಸಿದ್ದು, ಬೌಲಿಂಗ್ ನಲ್ಲಿ 253 ವಿಕೆಟ್ ಪಡೆದಿದ್ದರೆ . ಕಪಿಲ್ ದೇವ್ ಅವರು ತಮ್ಮ ಕ್ರಿಕೆಟ್  ವೃತ್ತಿ ಜೀವನದಲ್ಲಿ ಭಾರತಕ್ಕೆ ಹಲವಾರು ಪಂದ್ಯಗಳನ್ನು ಏಕಾಂಗಿಯಾಗಿ ಗೆದ್ದು ಕೊಟ್ಟಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.