ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗು ಬಿಜೆಪಿ ಮುಖಂಡ ದಿಲೀಪ್ ಗಾಂಧಿ (70) ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ.
ನಿನ್ನೆ ದಿಲೀಪ್ ಗಾಂಧಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮಾಜಿ ಪ್ರಧಾನಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ದಿಲೀಪ್ ಗಾಂಧಿ ಅವರು, ಮಹಾರಾಷ್ಟ್ರದ ಅಹ್ಮದ್‌ನಗರ ದಕ್ಷಿಣ ಲೋಕಸಭಾ ಕ್ಷೇತ್ರದಿಂದ 1999, 2009 & 2014ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.