BIG NEWS: ಆಕ್ಸಿಜನ್ ಕೊರತೆಯಿಂದ ನಾಲ್ವರು ಸಾವು: ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?

ಬೆಂಗಳೂರು: ಆಕ್ಸಿಜನ್ ಕೊರತೆಯಿಂದ ಕೋಲಾರದಲ್ಲಿ ನಾಲ್ವರು ಕೊರೋನಾ ಸೋಂಕಿತರು ಸಾವನ್ನಪ್ಪಿದ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ಮಾಹಿತಿ ನೀಡಿದ್ದು, ಆಕ್ಸಿಜನ್ ಸರಿಯಾದ ಸಮಯಕ್ಕೆ ಪೂರೈಸಲು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಡಿಹೆಚ್ಒ…

sudhakar health minister vijayaprabha news

ಬೆಂಗಳೂರು: ಆಕ್ಸಿಜನ್ ಕೊರತೆಯಿಂದ ಕೋಲಾರದಲ್ಲಿ ನಾಲ್ವರು ಕೊರೋನಾ ಸೋಂಕಿತರು ಸಾವನ್ನಪ್ಪಿದ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ಮಾಹಿತಿ ನೀಡಿದ್ದು, ಆಕ್ಸಿಜನ್ ಸರಿಯಾದ ಸಮಯಕ್ಕೆ ಪೂರೈಸಲು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಡಿಹೆಚ್ಒ ಅವರಿಂದ ಮಾಹಿತಿ ಪಡೆಯುವೆ. ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಕೊಂಡು ಹೇಳುತ್ತೇನೆ ಎಂದ ಅವರು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಗಂಭೀರ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಅನಗತ್ಯವಾಗಿ ಆಸ್ಪತ್ರೆಗೆ ಬಂದರೆ ಆಕ್ಸಿಜನ್ ಕೊರತೆಯಾಗುತ್ತದೆ: ಸುಧಾಕರ್

Vijayaprabha Mobile App free

ಇನ್ನು ಕೊರೋನಾ ಬಗ್ಗೆ ಆತಂಕಗೊಂಡು ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ತಿಳಿಸಿದ್ದು, ಅಲ್ಪ ಪ್ರಮಾಣದ ರೋಗ ಲಕ್ಷಣಗಳು ಇಲ್ಲದಿದ್ದರೂ ಆಸ್ಪತ್ರೆಗಳಿಗೆ ಜನ ದಾಖಲಾಗುತ್ತಿದ್ದಾರೆ. ಇದರಿಂದ ಸಮಸ್ಯೆ ಹೆಚ್ಚಿದೆ.

ರೋಗ ಲಕ್ಷಣ ಇಲ್ಲದವರು ಮನೆಯಲ್ಲಿಯೇ ಕುಳಿತು ಟೆಲಿಕಾಲಿಂಗ್ ಮೂಲಕ ಚಿಕಿತ್ಸೆ ಪಡೆಯಿರಿ. ಕೆಲವರು ಚಿಕಿತ್ಸೆ ಇಲ್ಲದೆಯೂ ಗುಣಮುಖರಾಗುತ್ತಾರೆ. ಕ್ರಿಟಿಕಲ್ ಇರುವವರು ಮಾತ್ರವೇ ಆಸ್ಪತ್ರೆಗೆ ಬನ್ನಿ ಎಂದು ಸುಧಾಕರ್ ಅವರು ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.