ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯ ನಿರೀಕ್ಷೆಯಿದ್ದು, ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭವಾಗಲಿದೆ.
ಕರಾವಳಿ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಲಿದ್ದು, ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದ್ದು, ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಕೂಡ 4 ದಿನ ಮಳೆಯಾಗಲಿದೆ.
ಇನ್ನು, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಹಾಗೂ ರಾಮನಗರ ಜಿಲ್ಲೆಗಳಲ್ಲಿ ಇಂದು ಸಾಧಾರಣದಿಂದ ಭಾರಿ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ ಹವಾಮಾನ ಇಲಾಖೆ ತಿಳಿಸಿದೆ.