ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಅವಘಡಗಳಿಂದ ನಾಲ್ವರು ಮೃತಪಟ್ಟಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇದನ್ನು ಓದಿ: Sukanya Samriddhi Yojana: ಹೀಗೆ ಮಾಡಿದ್ರೆ ನಿಮ್ಮ ಕೈಗೆ ಸಿಗಲಿದೆ ಬರೋಬ್ಬರಿ 64 ಲಕ್ಷ ರೂ!
ಗುಡುಗು ಸಹಿತ ವರುಣಾರ್ಭಟಕ್ಕೆ ನಾಲ್ಕು ಬಲಿ
ಹೌದು, ಗದಗ ಜಿಲ್ಲೆ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಮೊದಲ ವರ್ಷಧಾರೆಯಾಗಿದ್ದು, ಗದಗ ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ಸಿಡಿಲು ಸಹಿತ ಮಳೆಯಾಗಿದೆ. ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರಿಗೆ ಸಿಡಿಲು ಬಡಿದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಾಗಲಕೋಟೆಯಲ್ಲಿ ಕೂಡ ಇಬ್ಬರು ಸಾವನ್ನಪ್ಪಿದ್ದಾರೆ.
ಇದನ್ನು ಓದಿ: ಇನ್ಮುಂದೆ ಯುಪಿಐ ಮೂಲಕವೂ ಸಿಗಲಿದೆ ಸಾಲ; ಗೂಗಲ್ ಪೇ, ಫೋನ್‌ಪೇ ಮೂಲಕ ಸಾಲ ಹೇಗೆ?
ಹವಾಮಾನ ಇಲಾಖೆ ವರದಿಯಂತೆ ಇನ್ನು 48 ಗಂಟೆಗಳಲ್ಲಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆಯಿದ್ದು, ಬೆಳಗಾವಿ, ಬೀದರ್, ಗದಗ, ಹಾವೇರಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು, ರಾಜ್ಯದಲ್ಲಿ ಬಹುತೇಕ ಕಡೆಗಳಲ್ಲಿ ಬಿಸಿಲಿನ ಧಗೆಯಾದರೆ, ಕೆಲವೆಡೆ ಮಳೆ ಸುರಿಯುವ ಸಾಧ್ಯತೆ ಇದ್ದು, ಪ್ರಮುಖವಾಗಿ ಬೆಂಗಳೂರು ನಗರದ ಹಲವೆಡೆ ಸಂಜೆ ವೇಳೆಗೆ ತುಂತುರು ಮಳೆಯಾಗಲಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬಿರು ಬಿಸಿಲು ಮುಂದುವರಿಯಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಇರಲಿದೆ.
ಇದನ್ನು ಓದಿ: Airtel ಬಳಕೆದಾರರಿಗೆ ಒಳ್ಳೆಯ ಸುದ್ದಿ; ರೂ100 ಕ್ಯಾಶ್‌ಬ್ಯಾಕ್ ಸೇರಿದಂತೆ Disney Hotstar, Wink Music ಉಚಿತ