ಬೆಂಗಳೂರಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕಟ್ಟಡ ಕಾರ್ಮಿಕರ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದ್ದು, ಸರ್ಕಾರ ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ ವಿಸ್ತರಿಸಲು ಆದೇಶ ಹೊರಡಿಸಿದೆ.
ಹೌದು, ಈ ಪಾಸ್‌ಗೆ 1,400 ರೂ ನಿಗದಿಪಡಿಸಲಾಗಿದ್ದು, 45 ಕಿ.ಮೀ ವ್ಯಾಪ್ತಿಯೊಳಗೆ ಪ್ರಯಾಣಿಸಬಹುದು. ಪಾಸು ವಿತರಣಾ ವ್ಯವಸ್ಥೆಯ ದಿನಾಂಕ ಸದ್ಯದಲ್ಲೇ ಹೊರಬೀಳಲಿದೆ.
ಕಾರ್ಮಿಕ ಪಾಸು ಪಡೆಯುವುದು ಹೇಗೆ?
ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ಬೇರೆ ನಿರ್ಮಾಣ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ಸರ್ಕಾರ ಈ ಪಾಸ್‍ಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ವಿತರಿಸುತ್ತದೆ.
ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಅವರು ಇಚ್ಚಿಸುವ, ಪಾಸ್‌ನಲ್ಲಿ ನಮೂದಿಸಲಾಗುವ ಪ್ರಾರಂಭಿಕ ಸ್ಥಳದಿಂದ 45 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಬಹುದು. ಈ ಪಾಸ್‌ನ ಅವಧಿ 3 ತಿಂಗಳು.