ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನಗಳಂದು KSRTC ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿತ್ತು. ಇದೀಗ ಮುಂದುವರೆದು SSLC ವಿದ್ಯಾರ್ಥಿಗಳಿಗೂ ಪರೀಕ್ಷೆಯಂದು ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.
ಇದನ್ನು ಓದಿ: ವಿಚ್ಛೆದಿತ ಖ್ಯಾತ ನಟನೊಂದಿಗೆ ಪತಿ ಕಳೆದುಕೊಂಡ ಖ್ಯಾತ ನಟಿಯ ಮದುವೆ: ಧನುಷ್,ಮೀನಾ ಮದುವೆ ಬಗ್ಗೆ ಸ್ಪೋಟಕ ಮಾಹಿತಿ..!
ಈ ಕುರಿತು ಕೆ ಎಸ್ ಆರ್ ಟಿ ಸಿಯಿಂದ ಸುತ್ತೋಲೆ ಹೊರಡಿಸಿದ್ದು, ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ SSLC ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯಲಿದ್ದು, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು KSRTC ಅನುಮತಿ ನೀಡಿದೆ.
ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. KSRTC ನಿಗಮದ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನು ಓದಿ: ಮರಣದ ನಂತರ ಗುರುತಿನ ಚೀಟಿಗಳು ಏನಾಗುತ್ತವೆ; ಆಧಾರ್ ಕಾರ್ಡ್, ಪಾನ್ ಕಾರ್ಡ್, ವೋಟರ್ ಐಡಿ ಬಗ್ಗೆ ಮಹತ್ವದ ಮಾಹಿತಿ