Shakti Yojane: ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ? ಸಾರಿಗೆ ಸಚಿವರು ಏನಂದ್ರು ನೋಡಿ

ಹುಬ್ಬಳ್ಳಿ: ಪುರುಷರಿಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ನಿಟ್ಟಿನಲ್ಲಿ ಶಕ್ತಿ ಯೋಜನೆ ವಿಸ್ತರಿಸುವ ಬಗ್ಗೆ ತಮಗೆ ತಿಳಿದಿಲ್ಲ. ಇಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.…

ಹುಬ್ಬಳ್ಳಿ: ಪುರುಷರಿಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ನಿಟ್ಟಿನಲ್ಲಿ ಶಕ್ತಿ ಯೋಜನೆ ವಿಸ್ತರಿಸುವ ಬಗ್ಗೆ ತಮಗೆ ತಿಳಿದಿಲ್ಲ. ಇಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತ ಪ್ರಯಾಣದ ಸೌಲಭ್ಯ ನೀಡುವ ಕುರಿತು ಡಿಸಿಎಂ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆ ರೀತಿಯ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಚೆನ್ನಾಗಿ ನಡೆಯುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ ಅವರು ಶಾಲಾ ವಿದ್ಯಾರ್ಥಿಗಳ ಸಂವಾದದಲ್ಲಿ ಪುರುಷರಿಗೂ ಉಚಿತ ಬಸ್‌ ಪ್ರಯಾಣ ಸೌಲಭ್ಯ ಕಲ್ಪಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದರು.

Vijayaprabha Mobile App free

ಯಾವುದೇ ದೇಶದಲ್ಲಿ ಸಾರಿಗೆ ಸಂಸ್ಥೆ ಲಾಭದಲ್ಲಿರಲು ಸಾಧ್ಯವಿಲ್ಲ. ಅದೇ ರೀತಿ ರಾಜ್ಯದಲ್ಲೂ ಸಹ ನಮ್ಮ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಎಂದು ಹೇಳಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.