ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್. ದೊರೆಸ್ವಾಮಿ(103) ಅವರು ಹೃದಯಾಘಾತದಿಂದ ಬುಧವಾರ ಇಹಲೋಕ ತ್ಯಜಿಸಿದ್ದಾರೆ.
ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ಗುಣಮುಖರಾಗಿದ್ದರು. ಉಸಿರಾಟದ ಸಮಸ್ಯೆ ಕಂಡುಬಂದ ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ಗೆದ್ದು ಬದ್ದ ನಂತರ ಅವರು ಮತ್ತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇಂದು ಹೃದಯಾಘಾತದಿಂದಾಗಿ ದೊರೆಸ್ವಾಮಿ ಅವರು ಕೊನೆಯುಸಿರೆಳೆದಿದ್ದಾರೆ.
1918 ಏಪ್ರಿಲ್ 10ರಂದು ಕನಕಪುರದ ಹಾರೋಹಳ್ಳಿಯಲ್ಲಿ ಜನಿಸಿದ ಎಚ್.ಎಸ್. ದೊರೆಸ್ವಾಮಿ ಅವರು ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟದಲ್ಲೂ ಭಾಗವಹಿಸಿದ್ದರು.