ಕೊಪ್ಪಳ: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೊಪ್ಪಳ ಜಿಲ್ಲೆಯಾದ್ಯಂತ ಮೇ 24ರಿಂದ ಮುಂದಿನ 7 ದಿನಗಳವರೆಗೆ ಸಂಪೂರ್ಣ ಲಾಕ್ ಡೌನ್ ಹೇರಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅವರು ಇಂದು ಆದೇಶ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅವರು ಸುದ್ದಿಗಾರರೊಂದಿದೆ ಮಾತನಾಡಿ, ಲಾಕ್ ಡೌನ್ ವಿಸ್ತರಣೆ ಕುರಿತಂತೆ ಮಾಹಿತಿ ನೀಡಿದ್ದು, ಮುಂದಿನ ಎರಡು ದಿನಗಳು ಶನಿವಾರ ಮತ್ತು ಭಾನುವಾರ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಲಾಕ್ ಡೌನ್ ಜಾರಿ ಇರಲಿದ್ದು, ಅನಂತರ ಸೋಮವಾರದಿಂದ 7 ದಿನಗಳ ಕಾಲ ಮೇ 24 ರಿಂದ ಮೇ 30 ರ ರಾತ್ರಿ 12 ಗಂಟೆ ವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿ ಆಗಲಿದೆ ಎಂದು ತಿಳಿಸಿದ್ದಾರೆ.
ಇನ್ನು ನಾಳೆ & ನಾಡಿದ್ದು ದಿನಸಿ ಖರೀದಿಗೆ ಅವಕಾಶ ಇರಲಿದ್ದು, ಸಾರ್ವಜನಿಕರು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಖರೀದಿಸಬಹುದಾಗಿದ್ದು, ಕೋವಿಡ್ ನಿಯಮಗಳನ್ನು ಮೀರದಂತೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದು, ಇದನ್ನು ಹೊರತುಪಡಿಸಿದರೆ ಮೇ 31ರವರೆಗೆ ಯಾವುದೇ ದಿನಸಿ ಖರೀದಿಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅವರು ಸ್ಪಷ್ಟಪಡಿಸಿದ್ದಾರೆ.