ದಾವಣಗೆರೆ: ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ನಿಮಿತ್ತ ದಾವಣಗೆರೆಯಲ್ಲಿ ಆಯೋಜಿಸಿರುವ ‘ಸಿದ್ದರಾಮಯ್ಯ ಅಮೃತ ಮಹೋತ್ಸವ’ ಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದ್ದು, ಸಮಾವೇಶಕ್ಕೆ ಸುಮಾರು 10 ಲಕ್ಷ ಜನ ಬರುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.
ಇನ್ನು, 6 ಲಕ್ಷ ಮಂದಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದು, ಪ್ರಮುಖ ರಸ್ತೆಗಳಲ್ಲಿ ಸಿದ್ದರಾಮಯ್ಯ ಜನ್ಮದಿನಕ್ಕೆ ಶುಭಕೋರುವ ಫ್ಲೆಕ್ಸ್, ಬ್ಯಾನರ್‌ಗಳು ರಾರಾಜಿಸುತ್ತಿವೆ.
ಸಿದ್ದರಾಮೋತ್ಸವ: ಟ್ರಾಫಿಕ್ ಜಾಮ್..!
ಸಿದ್ದರಾಮೋತ್ಸವಕ್ಕಾಗಿ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಇದರಿಂದ ದಾವಣಗೆರೆ ಜಿಲ್ಲೆಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಹೌದು ಸುಮಾರು 6 ಕಿ.ಮೀ ಉದ್ದಕ್ಕೂ ಟ್ರಾಫಿಕ್ ಜಾಮ್ ಆಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.