ಕೊಪ್ಪಳ: ಪ್ರವಾಸಿಗರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಮಲ್ಲೇಶ್ ಅಲಿಯಾಸ್ ಹಂದಿ ಮಲ್ಲ ಮತ್ತು ಚೇತನ್ ಸಾಯಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಮಾರ್ಚ್ 6 ರಂದು, ರಾತ್ರಿ 11 ಗಂಟೆಗೆ, ಈ ಕಾಮುಕರು ಪ್ರವಾಸಿಗರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದು ಮತ್ತು ಇಸ್ರೇಲಿ ಪ್ರವಾಸಿ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಅದೇ ಸಮಯದಲ್ಲಿ, ಹೊರ ರಾಜ್ಯದಿಂದ ಬಂದ ನಾಲ್ವರು ಪ್ರವಾಸಿಗರ ಮೇಲೆ ದಾಳಿ ನಡೆಸಲಾಯಿತು.
ಪ್ರಸ್ತುತ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.