ಗ್ಯಾಸ್ ಸಿಲಿಂಡರ್ ಬೆಲೆ 5,500 ರೂ.ಗೆ ಏರಿಕೆ!

ಕೊಲೊಂಬೊ: ಶ್ರೀಲಂಕಾದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಏರಿದ್ದು, ಈ ನಡುವೆ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಭಾರೀ ಏರಿಕೆಯಾಗಿದೆ. ಈ ಮೊದಲು ಶ್ರೀಲಂಕಾ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 1000 ರೂಪಾಯಿ ಇತ್ತು, ಇದೀಗ…

Indane gas vijayaprabha

ಕೊಲೊಂಬೊ: ಶ್ರೀಲಂಕಾದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಏರಿದ್ದು, ಈ ನಡುವೆ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಭಾರೀ ಏರಿಕೆಯಾಗಿದೆ. ಈ ಮೊದಲು ಶ್ರೀಲಂಕಾ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 1000 ರೂಪಾಯಿ ಇತ್ತು, ಇದೀಗ ಅದನ್ನು ಬರೋಬ್ಬರಿ 5500 ರೂ.ಗೆ ಏರಿಕೆ ಮಾಡಲಾಗಿದೆ.

ಇದರಿಂದ ಜನ ಕಂಗಾಲಾಗಿದ್ದು, ಹಣ ಇಲ್ಲದೆ ಪರದಾಡುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಷ್ಟೊಂದು ಬೆಲೆ ಕೊಟ್ಟು ಗ್ಯಾಸ್ ಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಇನ್ನೊಂದು ಕಡೆ ಶ್ರೀಲಂಕಾದ ಪರಿಸ್ಥಿತಿ ದುಸ್ತರವಾಗಿದ್ದು, ಗ್ಯಾಸ್ ಬೆಲೆ ಎಷ್ಟೇ ಹೆಚ್ಚಿಸಿದರೂ ಕೇಳಲು ಅಲ್ಲಿ ಸ್ಥಿರ ಸರ್ಕಾರ ಇಲ್ಲ. ದೇಶದ ಪ್ರಭಾವಿ ನಾಯಕ, ಅಧ್ಯಕ್ಷ ಗೊಟಬಯ ರಾಜಪಕ್ಸ ದೇಶ ಬಿಟ್ಟು ಸಿಂಗಾಪುರಕ್ಕೆ ಪಲಾಯನ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.