ನವದೆಹಲಿ: ಕಳೆದ ಒಂದು ವಾರದಲ್ಲಿ ಮೂರು ಭಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗಿದ್ದು, ಅದೇ ರೀತಿ ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು 10 ರೂ.ನಷ್ಟು ಕಡಿಮೆ ಮಾಡಲಾಗಿದ್ದು, ಪರಿಷ್ಕೃತ ದರಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.
ಇನ್ನು, ಜಾಗತಿಕ ಮಾರುಕಟ್ಟೆಯಲ್ಲಿ ಕೊರೋನಾ ಎರಡನೇ ಅಲೆಯಿಂದ ಬೇಡಿಕೆ ಕಡಿಮೆಯಾಗಿರುವುದು ಮತ್ತು ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗಿದೆ ಎನ್ನಲಾಗಿದೆ. ಅದೇ ರೀತಿ ಸಿಲಿಂಡರ್ ಬೆಲೆ ಕೂಡ ಇಳಿಕೆ ಮಾಡಲಾಗಿದೆ ಎನ್ನಲಾಗಿದ್ದು, ಬೆಂಗಳೂರಿನಲ್ಲಿ 822 ರೂಪಾಯಿ ಇದ್ದ ಗ್ಯಾಸ್ ಸಿಲಿಂಡರ್ ಬೆಲೆ 812 ಆಗಲಿದ್ದು, ಇಂದಿನಿಂದ ಪರಿಷ್ಕೃತ ದರ ಜಾರಿಯಾಗಲಿದೆ.