Horrible News: ಪೆಟ್ರೋಲ್ ಪಂಪ್‌ನಲ್ಲಿ ಯುವತಿಗೆ ಕಾಲಿನಲ್ಲಿ ಒದ್ದು ಯುವಕನಿಂದ ಹಲ್ಲೆ! Video Viral

ಉತ್ತರಪ್ರದೇಶ: ಉತ್ತರಪ್ರದೇಶದ ಗಾಜಿಯಾಬಾದ್‌ನ ಪೆಟ್ರೋಲ್ ಪಂಪ್‌ನಲ್ಲಿ ಯುವಕನೋರ್ವ ತನ್ನ ಪ್ರಿಯತಮೆಯ ಮೇಲೆ ಸಾರ್ವಜನಿಕರ ಎದುರೇ ಹಿಂಸಾತ್ಮಕವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಸಾಹಿಬಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ…

ಉತ್ತರಪ್ರದೇಶ: ಉತ್ತರಪ್ರದೇಶದ ಗಾಜಿಯಾಬಾದ್‌ನ ಪೆಟ್ರೋಲ್ ಪಂಪ್‌ನಲ್ಲಿ ಯುವಕನೋರ್ವ ತನ್ನ ಪ್ರಿಯತಮೆಯ ಮೇಲೆ ಸಾರ್ವಜನಿಕರ ಎದುರೇ ಹಿಂಸಾತ್ಮಕವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಸಾಹಿಬಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಥಾಲಾ ಪ್ರದೇಶದ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದ್ದು ಎನ್ನಲಾಗಿದೆ. 

ಮೂಲಗಳ ಪ್ರಕಾರ ಬೈಕ್‌ಗೆ ಪೆಟ್ರೋಲ್ ಹಾಕಿಸುತ್ತಿದ್ದ  ವೇಳೆ ಯುವಕ-ಯುವತಿ ನಡುವೆ ಯಾವುದೋ ವಿಚಾರಕ್ಕೆ ಜಗಳ ಪ್ರಾರಂಭವಾಗಿದೆ. ತಕ್ಷಣವೇ ಮಾತಿಗೆ ಮಾತು ಬೆಳೆದು ವಾಗ್ವಾದವು ಹಲ್ಲೆಗೆ ತಿರುಗಿದ್ದು, ಯುವಕ ಏಕಾಏಕಿ ಯುವತಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಲು ಪ್ರಾರಂಭಿಸಿದ್ದಾನೆ. ಆತ ಯುವತಿಯನ್ನು ಹೊಡೆದು, ಕಾಲಿನಲ್ಲಿ ಒದೆಯುತ್ತಿರುವ ದೃಶ್ಯವು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಈ ವೇಳೆ ಎದುರಿಗಿದ್ದ ಸಾರ್ವಜನಿಕರಲ್ಲಿ ಯಾರೊಬ್ಬರೂ ಸಹ ಯುವಕನನ್ನು ತಡೆಯಲು ಮುಂದಾಗಿಲ್ಲವಾಗಿದ್ದು, ಯುವತಿಗೆ ಹಲ್ಲೆ ಮಾಡುವುದನ್ನು ನೋಡುತ್ತಾ ನಿಂತಿದ್ದಾರೆ.

ಪೊಲೀಸರ ಮಾಹಿತಿಯಂತೆ, ಯುವಕ ಮತ್ತು ಯುವತಿ ಕಳೆದ 5 ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದು ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಬೈಕ್‌ಗೆ ಪೆಟ್ರೋಲ್ ಹಾಕಿಸಲು ಪೆಟ್ರೋಲ್ ಪಂಪ್‌ಗೆ ಬಂದಾಗ, ಆ ಯುವಕನಿಗೆ ಮತ್ತೊಂದು ಮಹಿಳೆಯಿಂದ ಫೋನ್ ಬಂದ ಕಾರಣ ಇಬ್ಬರ ನಡುವೆ ವಾಗ್ವಾದ ಉಂಟಾಗಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.