ಗೋಹತ್ಯೆ ನಿಷೇದ ಮಸೂದೆಗೆ ಅಂಗೀಕಾರ; ಸ್ಪೀಕರ್ ನಿರ್ಧಾರಕ್ಕೆ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ವಿಧಾನಸಭೆಯ ಇಂದಿನ ಕಲಾಪದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದೆ. ಹೌದು, ಕಾಂಗ್ರೆಸ್ ಪಕ್ಷದ ವಿರೋಧದ ನಡುವೆಯೂ ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ಬಳಿಕ ಆಡಳಿತ ಪಕ್ಷದಿಂದ…

Siddaramaih vijayaprabha

ಬೆಂಗಳೂರು: ವಿಧಾನಸಭೆಯ ಇಂದಿನ ಕಲಾಪದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದೆ. ಹೌದು, ಕಾಂಗ್ರೆಸ್ ಪಕ್ಷದ ವಿರೋಧದ ನಡುವೆಯೂ ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು.

ಬಳಿಕ ಆಡಳಿತ ಪಕ್ಷದಿಂದ ಹೌದು ಎಂಬ ಧ್ವನಿಯನ್ನು ಪರಿಗಣಿಸಿದ ಸ್ಪೀಕರ್, ವಿಧೇಯಕವನ್ನು ಅಂಗೀಕರಿಸಿದರು. ವಿಧೇಯಕವನ್ನು ವಿಧಾನ ಪರಿಷತ್ ಗೆ ಕಳುಹಿಸಿ ಅಲ್ಲಿ ಅನುಮೋದನೆ ಪಡೆದ ಬಳಿಕ ರಾಜ್ಯಪಾಲರ ಅಂಕಿತದೊಂದಿಗೆ ಈ ವಿಧೇಯಕ ಕಾನೂನಾಗಿ ಜಾರಿಗೆ ಬರಲಿದೆ.

ಸ್ಪೀಕರ್ ನಿರ್ಧಾರಕ್ಕೆ ಸಿದ್ದರಾಮಯ್ಯ ಅಸಮಾಧಾನ:

Vijayaprabha Mobile App free

ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರಗೊಂಡಿದ್ದನ್ನು ವಿರೋಧಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸ್ಪೀಕರ್ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಸರ್ಕಾರ ಹೇಳಿದಂತೆ ಕೇಳುತ್ತಿದ್ದಾರೆ.

ಕಲಾಪ ಬಹಿಷ್ಕರಿಸಿ ಈ ಬಗ್ಗೆ ಜನರ ಮುಂದೆ ಹೋಗಿ ಹೇಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿ ಕೈ ಶಾಸಕರೊಂದಿಗೆ ಸದನದಿಂದ ಹೊರ ನಡೆದರು. ಸ್ಪೀಕರ್ ಮಸೂದೆ ಬಗ್ಗೆ ಚರ್ಚೆಗೆ ಅವಕಾಶ ಕೊಡದೆ ಧ್ವನಿ ಮತದ ಮೂಲಕ ಏಕಸ್ವಾಮ್ಯವಾಗಿ ನಿರ್ಧಾರ ಕೈಗೊಂಡರು ಎಂಬುದು ಸಿದ್ದರಾಮಯ್ಯ ಅವರ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.