Gokarna: ಮಹಾಬಲೇಶ್ವರ ಕ್ಷೇತ್ರದಲ್ಲಿ ನ.15 ರಂದು ದೀಪೋತ್ಸವ

ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದಲ್ಲಿ ವರ್ಷದ ಬಹುತೇಕ ದಿನಗಳಲ್ಲಿ ಇಲ್ಲಿಯ ಆರಾಧ್ಯ ದೈವ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ನ.15 ರಂದು ಸಂಜೆ 7.30 ರ ವೇಳೆಗೆ ಕ್ರೋಧಿ ಸಂವತ್ಸರದ…

ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದಲ್ಲಿ ವರ್ಷದ ಬಹುತೇಕ ದಿನಗಳಲ್ಲಿ ಇಲ್ಲಿಯ ಆರಾಧ್ಯ ದೈವ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ನ.15 ರಂದು ಸಂಜೆ 7.30 ರ ವೇಳೆಗೆ ಕ್ರೋಧಿ ಸಂವತ್ಸರದ ತ್ರಿಪುರಾಖ್ಯ ದೀಪೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ವ್ಯವಸ್ಥಾಪಕ ಸುಬ್ರಹ್ಮಣ್ಯ ಹೆಗಡೆ ತಿಳಿಸಿದ್ದಾರೆ.

ಪ್ರತಿವರ್ಷ ನಡೆಯುವ ಈ ದೀಪೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮದ ಭಕ್ತರು ಹಾಗೂ ಬೇರೆ ಬೇರೆ ಜಿಲ್ಲೆ ರಾಜ್ಯಗಳಿಂದ ಭಕ್ತರು ಆಗಮಿಸಿ ಈ ದೀಪೋತ್ಸವಕ್ಕೆ ಸಾಕ್ಷಿಯಾಗುತ್ತಾರೆ. ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ದೀಪವನ್ನು ಹಚ್ಚುವ ಮೂಲಕ ಇಡೀ ದೇವಾಲಯವೇ ಆಕರ್ಷಣೀಯವಾಗಿ ಕಂಡುಬರಲಿದೆ.

ಪ್ರತಿವರ್ಷ ದೀಪೋತ್ಸವದಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರಿ ಮಹಾಬಲೇಶ್ವರ ಸನ್ನಿಧಾನದಲ್ಲಿ ದೀಪವನ್ನು ಬೆಳಗುತ್ತಾರೆ. ಅಲ್ಲದೇ ಸ್ಥಳೀಯರು ಸಹ ಉತ್ಸಾಹದಿಂದ ದೀಪೋತ್ಸವದಲ್ಲಿ ಭಾಗಿಯಾಗಿಯಾಗುತ್ತಾರೆ. ಅಲ್ಲದೇ ಇಲ್ಲಿನ‌ ದೀಪೋತ್ಸವವನ್ನು ಕಣ್ತುಂಬಿಕೊಳ್ಳಲು ಹಲವೆಡೆಗಳಿಂದ ಭಕ್ತರು ಆಗಮಿಸುತ್ತಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.