ಮದ್ಯ ಪ್ರಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮದ್ಯ ಮಾರಾಟ ದರ ಏರಿಸುವ ಯಾವುದೇ ಚಿಂತನೆಯಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಹೌದು, ಆದಾಯ ಹೆಚ್ಚಳದ ಬಗ್ಗೆ ಬಜೆಟ್‌ಗೆ ಮುನ್ನ ಸಿಎಂ ಜತೆ ಚರ್ಚಿಸಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದು, ಕೊರೋನಾ ಕಷ್ಟದ ಸಂದರ್ಭದಲ್ಲಿ ಸಹ ಅಬಕಾರಿ ಇಲಾಖೆಯಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ಸಂದಾಯವಾಗಿದೆ. ಅಬಕಾರಿ ಸಂಘಟನೆಗಳ ವಿವಿಧ ಬೇಡಿಕೆಗಳ ಬಗ್ಗೆಯೂ ಸಿಎಂ ಜತೆ ಚರ್ಚಿಸುವುದಾಗಿಯೂ ಸಚಿವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.