ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು,ಇನ್ಮುಂದೆ ಕಾರು ಹೊಂದಿರುವವರ BPL ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಹೌದು, ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ‘ಈಗ 50,000 ರೂ ಹಾಗೂ 1 ಲಕ್ಷ ರೂಪಾಯಿಗೂ ಹಳೆಯ ಕಾರುಗಳು ಸಿಗುತ್ತವೆ. ಗಾರೆ ಮಾಡುವವರು, ಮೀನು ಹಿಡಿಯುವವರು ಕಾರು ತೆಗೆದುಕೊಂಡು ಹೋಗುತ್ತಾರೆ. ಅಂತವರ ಕಾರ್ಡ್ ರದ್ದಾಗಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇನ್ನು, ಈ ಬಗ್ಗೆ ಸಿಎಂ ಬೊಮ್ಮಾಯಿ ಅವರ ಜತೆ ಚರ್ಚಿಸಿ, ಬಡವರ ಜೀವನಾಧಾರಕ್ಕೆ ತೊಂದರೆಯಾಗುತ್ತದೆ ಎಂದು ಮನವರಿಕೆ ಮಾಡಿದ್ದೇನೆ. ಬಡವರ ಮೇಲೆ ಕರುಣೆ ತೋರಿ ಸಿಎಂ ಆದೇಶ ಹೊರಡಿಸುತ್ತಾರೆ’ ಎಂದು ಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ




