ರಾಜ್ಯದಲ್ಲಿ ಪೌರ ಕಾರ್ಮಿಕರ ನೌಕರಿ ಖಾಯಂಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಪೌರ ಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಇನ್ನೆರಡು ತಿಂಗಳಲ್ಲಿ ಆದೇಶ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.
ಹೌದು, ಮೈಸೂರಿನಲ್ಲಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಮುಂದಿನ ದಿನಗಳಲ್ಲಿ ಕಾಯಂಗೊಳಿಸಲಾಗುವುದು. ಕಾಯಂ ಪ್ರಕ್ರಿಯೆಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ, ಕ್ರಮ ಕೈಗೊಳ್ಳಲಾಗುವುದು. ಹಿಂದಿನ ಸರ್ಕಾರಗಳು ಮಾಡದ್ದನ್ನು ನಮ್ಮ ಸರ್ಕಾರ ಮಾಡುತ್ತಿದೆʼ ಎಂದು ಹೇಳಿದರು.
ಅಷ್ಟೇ ಆಲ್ಲ, ಸಫಾಯಿ ಕರ್ಮಚಾರಿ ಸಮಸ್ಯೆ ಪರಿಹಾರ ಆಗುವವರೆಗೆ ಪ್ರತಿಯೊಬ್ಬರಿಗೂ 2 ಸಾವಿರ ರೂ ನೀಡಲಾಗುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇನ್ನು, ರಾಜ್ಯದಲ್ಲಿ ಒಟ್ಟು 54 ಸಾವಿರಕ್ಕೂ ಹೆಚ್ಚು ಗುತ್ತಿಗೆ ಪೌರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ.