ನವದೆಹಲಿ: ಜಿಯೋ ಕಂಪನಿ ತನ್ನ ಗ್ರಾಹಕರಿಗೆ 444 ರೂಪಾಯಿಯ ರಿಚಾರ್ಜ್ ಪ್ಲಾನ್ ಅನ್ನು ಪರಿಚಯಿಸಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ.
ಈ ರಿಚಾರ್ಜ್ ಪ್ಲ್ಯಾನ್ ನಲ್ಲಿ ಗ್ರಾಹಕರಿಗೆ 56 ದಿನಗಳ ವ್ಯಾಲಿಡಿಟಿ ಸಿಗಲಿದ್ದು, ಈ ಪ್ಲಾನ್ ನಲ್ಲಿ ದಿನಕ್ಕೆ 2 ಜಿಬಿ ಡೇಟಾ ಸಿಗಲಿದೆ. ಈ ಪ್ಲ್ಯಾನ್ ಡೇಟಾ ಅವಧಿ ಮುಗಿದ ಬಳಿಕ ಬಳಕೆದಾರರು 64 kbps ವೇಗದಲ್ಲಿ ಇಂಟರ್ನೆಟ್ ಬಳಸಲು ಸಾಧ್ಯವಾಗಲಿದೆ.
ಇನ್ನು ಜಿಯೋ ಹೊರತುಪಡಿಸಿ ಇತರೆ ನೆಟ್ವರ್ಕ್ ಗಳಿಗೆ ಅನಿಯಮಿತ ಕರೆ ಸೌಲಭ್ಯ, 100 ಎಸ್‌ಎಂಎಸ್ ಹಾಗೂ ಜಿಯೋ ಅಪ್ಲಿಕೇಶನ್ ಗಳು ಪ್ರತಿದಿನ ಉಚಿತವಾಗಿ ಲಭ್ಯವಿರಲಿದೆ ಎಂದು ಹೇಳಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.