ನಿಮ್ಮ ಬಳಿ ಪ್ಯಾನ್ ಕಾರ್ಡ್ ಇದೆಯೇ? ಅಗಾದರೆ ನಿಮಗೆ ಒಳ್ಳೆಯ ಸುದ್ದಿ. ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಣಾಯಕ ನಿರ್ಧಾರ ತೆಗೆದುಕೊಂಡಿದ್ದು, ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಇದು ಅನುಕೂಲವಾಗಲಿದೆ. ಹೌದು ಪ್ಯಾನ್ ಆಧಾರ್ ಲಿಂಕ್ ವಿಸ್ತರಣೆಯನ್ನು ಮೋದಿ ಸರ್ಕಾರ ಪ್ರಕಟಿಸಿದ್ದು, ಇದರೊಂದಿಗೆ, ಪ್ಯಾನ್ ಆಧಾರ್‌ಗೆ ಇನ್ನೂ ಸಂಪರ್ಕವಿಲ್ಲದವರಿಗೆ ಸಮಯ ವಿಸ್ತರಣೆ ಮಾಡಿದೆ.
ಮೋದಿ ಸರ್ಕಾರ ಇತ್ತೀಚೆಗೆ ಪ್ಯಾನ್ ಆಧಾರ್ ಕಾರ್ಡ್ ಲಿಂಕ್ ಮಾಡುವ ಕಾಲಾವಧಿಯನ್ನು ಸೆಪ್ಟೆಂಬರ್ 30 ಕ್ಕೆ ವಿಸ್ತರಿಸಿದೆ. ಸಾಮಾನ್ಯವಾಗಿ, ಈ ಗಡುವು ಜೂನ್ 30 ಮುಗಿಯಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಈಗ ಪ್ಯಾನ್ ಆಧಾರ್ ಲಿಂಕ್ ಗಡುವನ್ನು ಇನ್ನೂ ಮೂರು ತಿಂಗಳು ವಿಸ್ತರಿಸಿದೆ.
ಸೆಕ್ಷನ್ 139 ಎಎ ಪ್ರಕಾರ, ಪ್ಯಾನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಬೇಕು. ನಿಗದಿತ ಸಮಯದೊಳಗೆ ಎರಡೂ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ಮಾನ್ಯವಾಗುವುದಿಲ್ಲ. ಇದರಿಂದ ಸಾಕಷ್ಟು ತೊಂದರೆ ಉಂಟಾಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment