ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ & ಪಂಗಡಕ್ಕೆ ಸೇರಿದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಗೃಹ ಬಳಕೆಯ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಹೌದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಸರ್ಕಾರ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಇಂಧನ ಇಲಾಖೆ ಡಿ.ಎಂ.ವಿನೋದ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.
ಈ ಯೋಜನೆ ಅನುಷ್ಠಾನದ ಕುರಿತು ಇಂಧನ ಅಧೀನ ಕಾರ್ಯದರ್ಶಿ ಡಿ.ಎಂ.ವಿನೋದ್ ಕುಮಾರ್ ಸುತ್ತೋಲೆ ಹೊರಡಿಸಿದ್ದು, ನಿಗದಿಪಡಿಸಿದಷ್ಟು ವಿದ್ಯುತ್ ಬಳಸಿದ ತರುವಾಯ ಹೆಚ್ಚು ವಿದ್ಯುತ್ ಬಳಸಿದರೆ ಅದಕ್ಕೆ ನಿಯಮಾನುಸಾರವಾಗಿ ಶುಲ್ಕ ವಿಧಿಸಲಾಗುತ್ತದೆಂದು ಸ್ಪಷ್ಟಪಡಿಸಿದ್ದಾರೆ.