SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ KSRTC ಬಸ್ನಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ, ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು 01.03.2025 ರಿಂದ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 21.03.2025 ರಿಂದ ಪ್ರಾರಂಭವಾಗಲಿವೆ. ಈ ನಿಟ್ಟಿನಲ್ಲಿ, ಪರೀಕ್ಷಾ ಕೇಂದ್ರಗಳನ್ನು ತಮ್ಮದೇ ಆದ ಶಿಕ್ಷಣ…

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ, ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು 01.03.2025 ರಿಂದ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 21.03.2025 ರಿಂದ ಪ್ರಾರಂಭವಾಗಲಿವೆ. ಈ ನಿಟ್ಟಿನಲ್ಲಿ, ಪರೀಕ್ಷಾ ಕೇಂದ್ರಗಳನ್ನು ತಮ್ಮದೇ ಆದ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಬೇರೆ ಶಿಕ್ಷಣ ಸಂಸ್ಥೆಗಳಿಗೆ ನಿಯೋಜಿಸಲಾಗಿರುವುದರಿಂದ, ಕ.ರಾ.ರ.ಸಾ ನಿಗಮವು ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರಗಳಿಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನಾಂಕದಂದು ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿದೆ. ಅಂದರೆ 01.03.2025 ರಿಂದ 20.03.2025 ರವರೆಗೆ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ 21.03.2025 ರಿಂದ 04.04.2025 ರವರೆಗೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ತಮ್ಮ ವಾಸಸ್ಥಳದಿಂದ ಗೊತ್ತುಪಡಿಸಿದ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷಾ ಪ್ರವೇಶ ಪತ್ರ”ವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.

ಈ ನಿಟ್ಟಿನಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಮತ್ತು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ತಮ್ಮ ವಾಸಸ್ಥಳಕ್ಕೆ ಮರಳಲು ಅನುವು ಮಾಡಿಕೊಡಲು ಸೂಕ್ತ ಮಾಹಿತಿಯನ್ನು ನೀಡುವಂತೆ ನಿಗಮದ ಎಲ್ಲಾ ಚಾಲಕರು ಮತ್ತು ನಿರ್ವಾಹಕರಿಗೆ ಸೂಚಿಸಲಾಗಿದೆ.  ಇದಲ್ಲದೆ, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದರೆ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಮಾರ್ಗಗಳಲ್ಲಿ ವಿನಂತಿಸಿದ ನಿಲುಗಡೆಗಳನ್ನು ಒದಗಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. 

Vijayaprabha Mobile App free

ಅಲ್ಲದೇ ಮೇಲಿನ ಸೂಚನೆಗಳನ್ನು ತಪ್ಪದೇ ಪಾಲಿಸುವಂತೆ ಚಾಲನಾ ಸಿಬ್ಬಂದಿಗೆ ತಿಳಿಸಲಾಗುತ್ತದೆ.  ಈ ವಿಷಯವನ್ನು ಎಲ್ಲಾ ಘಟಕಗಳು ಮತ್ತು ಬಸ್ ನಿಲ್ದಾಣಗಳ ನೋಟಿಸ್ ಬೋರ್ಡ್ಗಳಲ್ಲಿ ಪ್ರದರ್ಶಿಸಲು ಮತ್ತು ಮೇಲಿನ ಸೂಚನೆಗಳನ್ನು ಜಾರಿಗೆ ತರಲು ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ನಿಗಮವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.