ಬೆಂಗಳೂರು: ಕೇಂದ್ರದ ಬಾಡಿಗೆ ಕಾಯ್ದೆಯನ್ನು ರಾಜ್ಯದಲ್ಲೂ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದ್ದು, ಇದರಿಂದಾಗಿ ಮಾಲೀಕರು ಮತ್ತು ಬಾಡಿಗೆದಾರರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.
ಕಂದಾಯ ಸಚಿವ ಆರ್.ಅಶೋಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರ ಜೂನ್ 2 ರಂದು ಮಾದರಿ ಬಾಡಿಗೆದಾರಿಕೆ ಅಧಿನಿಯಮ ಕಾನೂನು ಜಾರಿಗೆ ತಂದಿದ್ದು, ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆ, ಸೂಚನೆ ಆಹ್ವಾನಿಸಿದ ನಂತರ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲ, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಅನುಕೂಲವಾಗುವಂತೆ ಹೊಸ ಕಾನೂನು ಕೂಡ ಜಾರಿಗೊಳಿಸಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.