ಬೆಂಗಳೂರು: ಬಡವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ ವಿಶೇಷ ವರ್ಗಗಳಿಗೆ 25 ಸಾವಿರ ಆಶ್ರಯ ಮನೆಗಳನ್ನು ನೀಡಲು ತೀರ್ಮಾನಿಸಿದೆ.
ಹೌದು, ವಿಧವೆಯರು, ಅಂಗವಿಕಲರು ಸೇರಿದಂತೆ ಸುಮಾರು 67 ವರ್ಗಗಳಿಗೆ ಆಶ್ರಯ ಮನೆ ನೀಡಲಾಗುತ್ತಿದ್ದು, ಹಿಂದಿನ ಸರ್ಕಾರದಲ್ಲಿ ಆಯ್ಕೆಯಾದ ಫಲಾನುಭವಿ ಪಟ್ಟಿ ರದ್ದುಪಡಿಸಿ, ಹೊಸ ಫಲಾನುಭವಿ ಪಟ್ಟಿ ಆಯ್ಕೆ ಮಾಡಲು ನಿರ್ಧರಿಸಿರುವುದು ಗೊಂದಲಕ್ಕೆ ಕಾರಣವಾಗಿದೆ.
ಇನ್ನು, ವಿಧವೆಯರು, ಅಂಗವಿಕಲರು ಸೇರಿದಂತೆ ಬಡವರಿಗೆ ಪ್ರತಿ ಜಿಲ್ಲೆಯಲ್ಲೂ 300-1000 ಮನೆ ನೀಡಲು ರಾಜೀವ್ ಗಾಂಧಿ ವಸತಿ ನಿಗಮ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.