ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ (ಹೆಚ್ಚು ದಾಖಲೆಗಳ ಅಗತ್ಯವಿಲ್ಲದೆ) ಸಾಲ ನೀಡುವುದಾಗಿ SBI ಘೋಷಿಸಿದೆ.
‘ಅಸ್ಮಿತಾ’ ಹೆಸರಿನಲ್ಲಿ ವಿಶೇಷ ಸಾಲ ನೀಡುವುದಾಗಿ ಹೇಳಿದೆ. ಮಹಿಳಾ ಉದ್ಯಮಿಗಳಿಗೆ ಸುಲಭವಾಗಿ ಸಾಲ ನೀಡಲಾಗುವುದು ಎಂದು ತಿಳಿಸಿದೆ.
‘ನಾರಿ ಶಕ್ತಿ’ ಡೆಬಿಟ್ ಕಾರ್ಡ್ ಅನ್ನು ಮಹಿಳೆಯರಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಬ್ಯಾಂಕ್ ಮಾಹಿತಿ ನೀಡಿದೆ. ಮತ್ತೊಂದೆಡೆ ಬ್ಯಾಂಕ್ ಆಫ್ ಬರೋಡಾ ಕೂಡ ಮಹಿಳೆಯರಿಗೆ ಅಗ್ಗದ ಬಡ್ಡಿ ದರದಲ್ಲಿ ಸಾಲ ನೀಡುವುದಾಗಿ ಘೋಷಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.