ಬೆಂಗಳೂರು: ಅಲ್ಪಾವದಿ ಸಾಲ ಪಡೆದ ರೈತರಿಗೆ ರಾಜ್ಯ ಸರ್ಕಾರ ಒಳ್ಳೆಯ ಸುದ್ದಿಯನ್ನು ನೀಡಿದ್ದು, ರಾಜ್ಯದ ರೈತರು ಸಹಕಾರ ಸಂಘ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ಅಲ್ಪಾವಧಿ ಬೆಳೆ ಸಾಲ ಪಡೆದು, 2018ರ ಜುಲೈ 7ರೊಳಗೆ ಹೊರ ಬಾಕಿಯಲ್ಲಿ ಗರಿಷ್ಠ 1 ಲಕ್ಷ ರೂ.ವರೆಗಿನ ಅಲ್ಪಾವಧಿ ಸಾಲದ ಮೊತ್ತವನ್ನು ಮನ್ನಾ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಹೌದು ಈ ಕುರಿತು ಮಾಹಿತಿ ನೀಡಿರುವ ಸಚಿವ ಎಸ್ ಟಿ ಸೋಮಶೇಖರ್ ಅವರು, ಮಾರ್ಚ್ ಅಂತ್ಯದೊಳಗೆ 295.15 ಕೋಟಿ ರೂ. ಮೊತ್ತವನ್ನು ನೆಫ್ಟ್ ಮೂಲಕ ಅರ್ಹ 57,229 ರೈತರ ಉಳಿತಾಯ ಖಾತೆಗಳಿಗೆ ವರ್ಗಾವಣೆ ಮಾಡಲು ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದು, ಮಾರ್ಚ್ ಅಂತ್ಯದೊಳಗೆ ಸಾಲ ಮನ್ನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.