ರಾಜ್ಯ ಸರ್ಕಾರದ ಮಹತ್ವದ ಆದೇಶ; ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸಿಹಿಸುದ್ದಿ

ಬೆಂಗಳೂರು: ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿಕೊಂಡವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದ್ದು, 2015 ಜನವರಿ 1 ಕ್ಕಿಂತ ಮೊದಲು ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು…

Minister R Ashok vijayaprabha

ಬೆಂಗಳೂರು: ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿಕೊಂಡವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದ್ದು, 2015 ಜನವರಿ 1 ಕ್ಕಿಂತ ಮೊದಲು ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅವಕಾಶವನ್ನು 2022 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

ಕಂದಾಯ ಸಚಿವ ಆರ್. ಅಶೋಕ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸಿಕೊಳ್ಳುವುದಕ್ಕೆ ಕರ್ನಾಟಕ ಭೂಕಂದಾಯ ಕಾಯ್ದೆಯ ಕಲಂ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಈ ಅರ್ಜಿಗಳನ್ನು ಸ್ವೀಕರಿಸಲು 2019 ರ ಮಾರ್ಚ್ 31 ರವರೆಗೆ ನಿಗದಿಪಡಿಸಲಾಗಿತ್ತು. ಆದರೆ ಸದ್ಯಕ್ಕೆ ಇದನ್ನು 2022 ರ ಮಾರ್ಚ್ 31 ಕಾಲಾವಕಾಶ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ, ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅರ್ಜಿಗಳನ್ನು ಸ್ವೀಕರಿಸಿ, ದಾಖಲೆಗಳ ಪರಿಶೀಲನೆ ನಡೆಸಿದ ನಂತರ 2023ರ ಮಾರ್ಚ್ 31 ಹಕ್ಕುಪತ್ರ ವಿತರಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.