ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 1ರಂದು 9ರಿಂದ 12ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿದ್ದು, ಉಳಿದ ತರಗತಿಗಳು ವಿದ್ಯಾಗಮದಲ್ಲಿ ನಡೆಯುತ್ತಿವೆ.
ಆದರೆ ಇನ್ನು ಸಾಕಷ್ಟು ವಿದ್ಯಾರ್ಥಿಗಳು ಇನ್ನೂ ದಾಖಲಾತಿ ಪಡೆದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ದಾಖಲಾತಿ ಪಡೆಯುವ ಸಲುವಾಗಿ ದಾಖಲಾತಿಗೆ ಕಾಲಾವಕಾಶವನ್ನು ಫೆಬ್ರವರಿ 20ರವರೆಗೆ ವಿಸ್ತರಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಟಿಪ್ಪಣಿ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಇನ್ನು ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, 2020-21ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳು ದಿನಾಂಕ 05:03:2021 ರೊಳಗಾಗಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಇಲಾಖೆ ತಿಳಿಸಿದೆ.
ವಿದ್ಯಾರ್ಥಿಗಳು www.ssp.postmatric.karnataka.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.