ನವದೆಹಲಿ: BSNL ಗ್ರಾಹಕರಿಗೆ ಸರ್ಕಾರ ಗ್ರಾಹಕರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದೆ. ಹೌದು, ರಾಜ್ಯಗಳ ಐಟಿ ಸಚಿವರ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೊಸ ಟವರ್ ಗಳ ಸ್ಥಾಪನೆಗೆ ಸರ್ಕಾರ 36,000 ಕೋಟಿ ರೂ ಮಂಜೂರು ಮಾಡಿದೆ ಎಂದು ಹೇಳಿದ್ದಾರೆ.
ಮುಂಬರುವ 2 ವರ್ಷಗಳಲ್ಲಿ 25000 ಟೆಲಿಕಾಂ ಟವರ್ ಗಳನ್ನು ಅಂದರೆ ಮೊಬೈಲ್ ಟವರ್ ಗಳನ್ನು ಸ್ಥಾಪಿಸಲು ಶೀಘ್ರದಲ್ಲೇ ಸರ್ಕಾರವು ಕ್ರಮ ಕೈಗೊಳ್ಳಲಿದ್ದು, ಈ ಸಂಪರ್ಕವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಒಂದು ಸವಾಲು ಎಂದು ಬಣ್ಣಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.